ದೇಶಕ್ಕೆ ಮೋದಿಯೇ ಗ್ಯಾರಂಟಿ: ಬಿಜೆಪಿ ವಿಜಯೋತ್ಸವ ಸಂಭ್ರಮದಲ್ಲಿ ಶಾಸಕ ಕಾಮತ್

Upayuktha
0




ಮಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ 3ನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.


ಉತ್ತರದ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಗಳ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಸಂಜೆ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂಬುದನ್ನು ಆ ರಾಜ್ಯಗಳ ಜನತೆ ಮತ್ತೊಮ್ಮೆ ಸಮರ್ಥಿಸಿ ತೋರಿಸಿದ್ದಾರೆ ಎಂದರು.


ವಿಜಯೋತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ, ಜಿಲ್ಲಾ ವಕ್ತಾರ ಜಗದೀಶ್ ಶೇಣವ, ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದಭರ್ಭದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.


 


ಈ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ನಡ್ಡಾಜಿ, ಮೋದಿಜಿ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ನಾಯಕರುಗಳಿಗೂ ಹೃತ್ಪೂರ್ವಕ ಅಭಿನಂದನೆಗಳು. ಇನ್ನು ಮೇಲೆ ದೇಶಕ್ಕೆ ಕಾಂಗ್ರೆಸ್ಸಿನ ಯಾವುದೇ ಸುಳ್ಳು ಗ್ಯಾರಂಟಿಗಳ ಉಪಯೋಗವಿಲ್ಲ, ದೇಶಕ್ಕೆ 2024 ರಲ್ಲೂ ನರೇಂದ್ರ ಮೋದಿಜಿಯೇ ಗ್ಯಾರಂಟಿ ಎಂಬ ಸ್ಪಷ್ಟ ಚಿತ್ರಣ ಗೋಚರಿಸಿದೆ. ಆ ಮೂಲಕ ಮತ್ತೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎಂದು ಇದೇ ವೇಳೆ  ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು.



ಕರ್ನಾಟಕದ ಜನತೆಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡಿದ ಕಾಂಗ್ರೆಸ್ ಅದನ್ನು ಸಮರ್ಪಕವಾಗಿ ಕೊಡಲಾಗದೆ ಹತ್ತು ಹಲವು ನಿಯಮಗಳನ್ನು ಹೇರಿ ಗ್ಯಾರಂಟಿಯಿಂದ ಜನರನ್ನು ವಂಚನೆ ಮಾಡಿದ್ದನ್ನು ಸರಿಯಾಗಿ ಅರ್ಥೈಸಿಕೊಂಡ ಮತದಾರರು ಕಾಂಗ್ರೆಸಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಕರ್ನಾಟಕದಿಂದ ಅಕ್ರಮವಾಗಿ ಕೋಟ್ಯಂತರ ರೂಪಾಯಿಗಳನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಂಡ ಕಾಂಗ್ರೆಸ್ ಬಿ ಆರ್ ಎಸ್ ಪಕ್ಷದ ಆಡಳಿತ ವಿರೋಧದ ಅಲೆಯಿಂದಾಗಿ ಗೆದ್ದಿರಬಹುದು. ಆದರೆ ಮುಂದಿನ ದಿನಗಳಲ್ಲಿ ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದಲ್ಲಿಯೂ ಕೂಡ ಗ್ಯಾರಂಟಿಗಳನ್ನು ಕೊಡಲಾಗದೆ ಇಲ್ಲ ಸಲ್ಲದ ನಿಯಮಗಳನ್ನು ಹೇರಿ ಜನರಿಗೆ ಮೋಸ ಮಾಡಲಿದೆ ಎಂದು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top