ಸಾರ್ವಜನಿಕ ದೂರಗಳಿಗೆ ತ್ವರಿತವಾಗಿ ಸ್ಪಂದಿಸಲು ಮಂಗಳೂರು ಡಿಸಿ ಸೂಚನೆ

Upayuktha
0


ಮಂಗಳೂರು: ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ಸೂಚಿಸಿದ್ದಾರೆ.


ಅವರು ಬುಧವಾರ ಮಂಗಳೂರು ತಾಲೂಕು ಕಚೇರಿಯ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಮಾತನಾಡಿದರು.


ತಾಲೂಕು ಕಚೇರಿಯು ಸಾರ್ವಜನಿಕರಿಗೆ ಅತಿ ಮುಖ್ಯ ಸೇವೆ ನೀಡುವ ಕಚೇರಿಯಾಗಿದೆ. ಸರಕಾರದ ವಿವಿಧ ಯೋಜನೆಗಳಿಗೆ ಕಂದಾಯ ಇಲಾಖೆಯ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.


ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಹಾಗೂ ಫ್ರೂಟ್ ತಂತ್ರಾಂಶ ನೋಂದಣಿ ಪ್ರಗತಿ ಪರಿಶೀಲಿಸಿದ ಅವರು ನಿರೀಕ್ಷಿತ ಗುರಿ ಸಾಧನೆ ಆಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಹೆಚ್ಚು ಒತ್ತು ನೀಡಲು ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದರು. ರೈತರು ಸ್ವತ: ಮುಂದೆ ಬಂದು ಆಧಾರ್ ಮಾಹಿತಿಯೊಂದಿಗೆ ಫ್ರುಟ್ ತಂತ್ರಾಂಶದಲ್ಲಿ ನೋಂದಣಿ ಮಾಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ಬೆಳೆ ಪರಿಹಾರ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಇದಕ್ಕೂ ಮೊದಲು ಮಂಗಳೂರು ತಾಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ಸಾರ್ವಜನಿಕ ಅಹವಾಲುಗಳನ್ನು ಆಲಿಸಿ ಮಾಹಿತಿ ಪಡೆದರು.

 ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top