ಮಂಗಳೂರು: ದೈವಜ್ಞ ಬ್ರಾಹ್ಮಣರ ಸಂಘದ 64ನೇ ವಾರ್ಷಿಕ ಮಹಾಸಭೆಯು ಭಾನುವಾರ (ಡಿ.3) ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಿತು.
ಉಡುಪಿ ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಎಸ್. ಸುಬ್ರಹ್ಮಣ್ಯ ಶೇಟ್ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರಿನ ನಿವೃತ್ತ ಅಧ್ಯಾಪಕರಾದ ಶ್ರೀಮತಿ ಸುಭದ್ರ ಅರುಣ ಕುಮಾರ್ ಶೇಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ದೈವಜ್ಞ ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ ಡಾಕ್ಟರ್ ಸೂರಜ್ ಮಂಜುನಾಥ ರೇವಣಕರ್ (MBBS, MS Ortho Surgeon) ಹಾಗೂ ಸನ್ನೀತ್ ಕೃಷ್ಣ ಶೇಟ್ (S & S Solutions) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಕೆ. ಸುಧಾಕರ ಶೇಟ್, ಉಪಾಧ್ಯಕ್ಷ ಎಸ್. ರಮಾನಂದ ಶೇಟ್, ಕಾರ್ಯದರ್ಶಿ ಬಿ. ಸುರೇಶ್ ಶೇಟ್ ಹಾಗೂ ಕೋಶಾಧಿಕಾರಿ ಉಮೇಶ್ ರೇವಣಕರ್ ಉಪಸ್ಥಿತರಿದ್ದರು. ಎಸ್. ರಾಜೇಂದ್ರಕಾಂತ ಶೇಟ್ ಸ್ವಾಗತಿಸಿ ಧನ್ಯವಾದ ಸಮರ್ಪಿಸಿ ಕಾರ್ಯಕ್ರಮ ನೆರವೇರಿಸಿ ಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ