ಮತದಾರರ ದಿನಾಚರಣೆ: ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು

Upayuktha
0

 


ಮಂಗಳೂರು: ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ರಚನಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಕಾರ್‍ಸ್ಟ್ರೀಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ  ನಡೆಸಲಾಯಿತು. 


ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ 170ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು. 


ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ ಕಾರ್ಯಕ್ರಮ  ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು.


ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಹಿಂದುಳಿದ ವರ್ಗ ಇಲಾಖೆಯ ಜಿಲ್ಲಾ ಅಧಿಕಾರಿ ಹಾಗೂ ಸ್ಪೀಪ್ ಜಿಲ್ಲಾ ನೋಡಲ್ ಅಧಿಕಾರಿ ಸಚಿನ್ ಕುಮಾರ್ ಭಾಗವಹಿಸಿ, ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬನ ಮತವೂ ಮೌಲ್ಯಯುತವಾಗಿರುವುದರಿಂದ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗಪ್ಪ ಗೌಡ ಪ್ರಾಸ್ತಾವಿಕ ಮಾತಾನಾಡಿದರು. 


ಜಂಟಿ ಕಾಲೇಜು  ನಿರ್ದೇಶಕರ ಕಛೇರಿಯ ವಿಶೇಷಾಧಿಕಾರಿಗಳಾದ ದೇವಿ ಪ್ರಸಾದ್ ಸ್ವಾಗತಿಸಿದರು.

 

ಉಪನ್ಯಾಸಕಿ ಲೀಲಾವತಿ ವಂದಿಸಿದರು. ಕಾಲೇಜಿನ ಮತದಾರರ ಸಾಕ್ಷರತಾ ಸಮಿತಿಯ ಸಂಚಾಲಕಿ ನಸೀಮಾ ಬೇಗಂ ಕಾರ್ಯಕ್ರಮ ನಿರೂಪಿಸಿದರು. ಎಂ.ಕಾಂ ವಿದ್ಯಾರ್ಥಿನಿ ಕು. ಸುಧೀಕ್ಷಾ ಪ್ರಾರ್ಥಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top