ಏಳನೇ ವರ್ಷದ "ಮಂಗಳೂರು ಕಂಬಳ" ಡಿ. 30ಕ್ಕೆ

Chandrashekhara Kulamarva
0

ಬಂಗ್ರ ಕೂಳೂರು ಗೋಲ್ಡ್ ಫಿಂಚ್ ಸಿಟಿಯ  ರಾಮಲಕ್ಷ್ಮಣ  "ಜೋಡು ಕೆರೆ" ಯಲ್ಲಿ ಬ್ರಿಜೇಶ್ ಚೌಟರ ನೇತೃತ್ವದಲ್ಲಿ  ನಡೆಯಲಿರುವ  7ನೇ ವರ್ಷದ ಹೊನಲು ಬೆಳಕಿನ ಕಂಬಳ



ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.




ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ ಉದ್ಘಾಟನೆ ಗೊಳ್ಳಲಿದೆ. ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಉದ್ಘಾಟನೆ ನೆರವೇರಿಸಲಿದ್ದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಇದರ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. 




ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ ಜೀ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ.ಪ್ರಕಾಶ್ ಶೆಟ್ಟಿ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ, ಸಂಸದ ನಳಿನ್ ಕುಮಾರ್ ಕಟೀಲ್, ಸ್ಪೀಕರ್ ಯು.ಟಿ. ಖಾದರ್, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.




ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಕೋಶಾಧಿಕಾರಿ ಪ್ರೀತಮ್ ರೈ, ಉಪಾಧ್ಯಕ್ಷ ಸಂಜಯ್ ಪ್ರಭು, ಅಜಿತ್ ಬೋಪಯ್ಯ, ಈಶ್ವರ್ ಪ್ರಸಾದ್ ಶೆಟ್ಟಿ, ಗೌರವ ಸಲಹೆಗಾರ ವಿಜಯ್ ಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top