ಡಿ.30: ಕುಡ್ಲದ ತುಳು ಕೂಟ ( ರಿ) ದ ಬಂಗಾರ್ ಪರ್ಬೊ ಸಮಾರೋಪ

Upayuktha
0


ಮಂಗಳೂರು: ತುಳು ಕೂಟದ ಹತ್ತು ಸಮಾರಂಭಗಳ ಸರಣಿಯು ಡಿ.30ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣ ಗುರು ಪ.ಪೂ.ಕಾಲೇಜಿನಲ್ಲಿ ಜರಗಲಿದೆ. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ದಯಾಕರ ಕುಳಾಯಿಯವರು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ತುಳುಕೂಟದ ಅಧ್ಯಕ್ಷ ಮರೋಳಿ ಬಿ.ದಾಮೋದರ ನಿಸರ್ಗರು ಅಧ್ಯಕ್ಷತೆ ವಹಿಸಲಿದ್ದಾರೆ.


ಮಾಜಿ ಸೈನಿಕರ ಅಸೋಸಿಯೇಶನ್ಸ್ ನ ಅಧ್ಯಕರಾದ ಶ್ರೀ ಶ್ರೀಕಾಂತ ಶೆಟ್ಟಿ ಬಾಳ, ಜಾನಪದ ವಿದ್ವಾಂಸ ಡಾ. ಗಣೇಶ್ ಅಮಿನ್ ಸಂಕಮಾರ್, ಚಂದ್ರಶೇಖರ ನಾನಿಲ್., ರಾಜಾರಾಮ್ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸಭಾ ಕಾರ್ಯಕ್ರಮದ ಬಳಿಕ ಹೈ ಸ್ಕೂಲ್ ಮತ್ತು ಪ.ಪೂ. ವಿದ್ಯಾರ್ಥಿಗಳಿಗಾಗಿ ತುಳುವರ ವಾದ್ಯ ವಾದನಗಳ ಸ್ಪರ್ಧೆ ನಡೆಯಲಿದೆ ಎಂದು ಕೂಟದ ಪ್ರ.ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Advt Slider:
To Top