ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗದ ವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಉಪಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್ ಕುಮಾರ್, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯ ಜಾಲವನ್ನು ಪತ್ತೆ ಮಾಡಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು. ಅಲ್ಲದೇ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಯುವ ಜನಾಂಗವು ಮಾದಕ ದ್ರವ್ಯದ ಜಾಲದಲ್ಲಿ ಬೀಳದೇ ಉತ್ತಮವಾದ ಬದುಕು ಕಟ್ಟಿಕೊಳ್ಳುವಂತೆ ಕರೆಯಿತ್ತರು.
ದಕ್ಷಿಣ ಪೊಲೀಸ್ ಕೇಂದ್ರದ ಪೊಲೀಸ್ ಗುರುರಾಜ್, ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಪ್ರೊ. ರಾಮಕೃಷ್ಣ ಬಿ.ಎಂ., ಸ್ನಾತಕೋತ್ತರ ಇತಿಹಾಸ ಹಾಗೂ ಪುರಾತತ್ತ್ವಶಾಸ್ತ್ರ ವಿಭಾಗದ ಸಂಯೋಜಕಿ ಡಾ. ಮೀನಾಕ್ಷಿ ಎಂ. ಎಂ., ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಯೋಗ ವಿಜ್ಞಾನದ ಸಂಯೋಜಕ ಪ್ರೊ. ಕೇಶವಮೂರ್ತಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ