ನಡ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

Upayuktha
0


ಬೆಳ್ತಂಗಡಿ: "ಸೋತವನಿಗೆ ಮತ್ತೆ ಗೆಲ್ಲುವ ಅವಕಾಶ ಇದೆ. ನಿರಂತರ ಪ್ರಯತ್ನದಿಂದ ಒಬ್ಬ ಸಾಮಾನ್ಯ ವಿದ್ಯಾರ್ಥಿ ಒಬ್ಬ ಅಸಾಮಾನ್ಯ ವ್ಯಕ್ತಿ ಯಾಗಬಹುದು. ಕ್ಷಣಿಕ ಸುಖಕ್ಕೋಸ್ಕರ ದೀರ್ಘ ಕಾಲದ ಸುಖವನ್ನು ಕಳೆದುಕೊಳ್ಳಬಾರದು. ಭವ್ಯ ಭಾರತವನ್ನು ಮುನ್ನಡೆಸುವ ಜವಾಬ್ದಾರಿ ವಿದ್ಯಾರ್ಥಿ ಸಮೂಹದ ಮೇಲಿದೆ" ಎಂಬುದಾಗಿ ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಅಭಿಪ್ರಾಯಪಟ್ಟರು.



ಅವರು ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆ ಇಲ್ಲಿಯ ಮುಖ್ಯ ಶಿಕ್ಷಕ ಭೋಜ ಸರ್ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿದ್ದರು. ಊರಿನ ಗಣ್ಯ ವ್ಯಕ್ತಿಗಳಾದ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಆರಿಗ, ಪ್ರೌಢ ಶಾಲಾ ಮುಖ್ಯಶಿಕ್ಷಕ ಯಾಕೂಬ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನ್ವಿತ್ ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 11 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಅಮೇರಿಕಾದ ನರೇಂದ್ರನಾಥ್ ಲರ್ನಿಂಗ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ಕೊಡಮಾಡಿಸಲು ಸಹಕರಿಸಿದ ನಡ ಪ್ರೌಢ ಶಾಲಾ ನಿವೃತ್ತ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಜಾಹ್ನವಿ ಮತ್ತು ವಿದ್ಯಾರ್ಥಿಗಳಿಗೆ ಕ್ರೀಡಾ ಮಾರ್ಗದರ್ಶಿಯಾಗಿ ಸಹಕರಿಸಿ ಬಹಳಷ್ಟು ಪ್ರಶಸ್ತಿಗಳನ್ನು ಪಡೆಯಲು ಕಾರಣಕರ್ತರಾದ ಅಜಿತ್ ಇವರುಗಳನ್ನು ಗುರುತಿಸಿ ಗೌರವಿಸಲಾಯಿತು.


ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ. ಈ ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ತಮ್ಮ ಮಾತೃಶ್ರೀಯವರ ನೆನಪಿಗಾಗಿ ಕೊಡಮಾಡಿದ ದತ್ತಿನಿಧಿ ಮತ್ತು ವಿಷಯವಾರು ಉಪನ್ಯಾಸಕರು ಕೊಡಮಾಡುವ ನಗದು ಬಹುಮಾನಗಳ ಪಟ್ಟಿಯನ್ನು ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಶರ್ಮಿಳಾ ವಾಚಿಸಿದರು. ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪವಿತ್ರ, ಆಟೋಟ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಆಂಗ್ಲ ಭಾಷಾ ಉಪನ್ಯಾಸಕಿ ಚೇತನಿಯವರು ನಿರ್ವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ತಾಲೂಕು ಮಟ್ಟದ ಮತದಾರರ ಅರಿವು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿನ "ಸರ್ವೋತ್ತಮ ವಿದ್ಯಾರ್ಥಿ" ಲಾವಣ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.


ವಿದ್ಯಾರ್ಥಿನಿಯರಾದ ಸವಿತಾ, ಪ್ರಾಪ್ತಿ, ಯಕ್ಷಿತಾ, ನಸ್ರೀನಾ  ಪ್ರಾರ್ಥಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿ.ವಿ. ವರದಿ ವಾಚನಗೈದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಯವರು ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಮೋಹನ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಮಧ್ಯಾಹ್ನದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top