ದ.ಕ. ಜಿಲ್ಲೆಯ ರಾ. ಹೆದ್ದಾರಿ ಅಭಿವೃದ್ಧಿ: 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ

Chandrashekhara Kulamarva
0

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್ ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ. ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73  ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.


ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.


إرسال تعليق

0 تعليقات
إرسال تعليق (0)
To Top