ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲು ಡಿ.19ರಿಂದ ಎರಡು ದಿನಗಳ ನಿಟ್ಟೆ ಮಲ್ಟಿ - ಕಾನ್ಫರೆನ್ಸ್ 'ಐ.ಸಿ.ಇ.ಟಿ.ಇ-2023'

Upayuktha
0


ನಿಟ್ಟೆ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಪ್ರತಿರ‍್ಷ ನಡೆಸುವ ಅಂತಾರಾಷ್ಟ್ರೀಯ ಮಟ್ಟದ ಕಾನ್ಫರೆನ್ಸ್ 'ಐ.ಸಿ.ಇ.ಟಿ.ಇ' ನ್ನು ಡಿಸೆಂಬರ್ 19 ಮತ್ತು 20 ರಂದು ನಿಟ್ಟೆ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. ಈ ಬಾರಿ 7 ವಿವಿಧ ಅಂತಾರಾಷ್ಟ್ರೀಯ ಮಟ್ಟದ ಮಲ್ಟಿ-ಕಾನ್ಫರೆನ್ಸ್ ನ್ನು ಕಾಲೇಜು ಆಯೋಜಿಸಿದೆ.




ಬಯೋಟೆಕ್ನಾಲಜಿ ವಿಭಾಗದ ವತಿಯಿಂದ 'ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ರ‍್ಚರಿಂಗ್ ಇನ್ನೋವೇಟಿವ್ ಟೆಕ್ನಾಲಾಜಿಕಲ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್- ಬಯೋಸೈನ್ಸ್' ಎಂಬ ಕಾನ್ಫರೆನ್ಸನ್ನು ಹಮ್ಮಿಕೊಳ್ಳಲಾಗಿದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ 'ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಸಿವಿಲ್ ಇಂಜಿನಿಯರಿಂಗ್ ಟ್ರೆಂಡ್ಸ್ ಆ್ಯಂಡ್ ಚ್ಯಾಲೆಂಜಸ್ ಫಾರ್ ಸಸ್ಟೈನೆಬಿಲಿಟಿ' ಎಂಬ ಕಾನ್ಫರೆನ್ಸ್, ರ‍್ಟಿಫಿಶಿಯಲ್ ಇಂಟಲಿಜೆನ್ಸ್, ಕಂಪ್ಯೂಟರ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಇನ್ಫರ‍್ಮೇಶನ್ ಸೈನ್, ಎಂ.ಸಿ.ಎ ವಿಭಾಗಗಳ ಜಂಟಿ ಆಶ್ರಯದಲ್ಲಿ 'ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಆನ್ ರ‍್ಟಿಫೀಶಿಯಲ್ ಇಂಟಲಿಜೆನ್ಸ್ & ಡೇಟಾ ಇಂಜಿನಿಯರಿಂಗ್', ಎಲೆಕ್ಟ್ರಿಕಲ್ ವಿಭಾಗದ ವತಿಯಿಂದ 'ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಆನ್ ಎಡ್ವಾನ್ಸಸ್ ಇನ್ ರಿನೀವೇಬಲ್ ಎರ‍್ಜಿ & ಇಲೆಕ್ಟ್ರಿಕ್ ವೆಹಿಕಲ್, ಇಲೆಕ್ಟ್ರಾನಿಕ್ಸ್ ವಿಭಾಗದ 'ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಆನ್ ವಿ.ಎಲ್.ಎಸ್.ಐ, ಸಿಗ್ನಲ್ ಪ್ರೊಸೆಸಿಂಗ್, ಪವರ್ ಎಲೆಕ್ಟ್ರಾನಿಕ್ಸ್, ಐಒಟಿ, ಕಮ್ಯೂನಿಕೇಶನ್ & ಎಂಬೆಡೆಡ್ ಸಿಸ್ಟಮ್ಸ್', ಮೆಕ್ಯಾನಿಕಲ್ ಹಾಗೂ ರೋಬೋಟಿಕ್ಸ್ ವಿಭಾಗದ 'ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಆನ್ ಸ್ಮರ‍್ಟ್ ಆ್ಯಂಡ್ ಸಸ್ಟೈನೇಬಲ್ ಡೆವಲಪ್ಮೆಂಟ್ಸ್ ಇನ್ ಮೆಟೀರಿಯಲ್ಸ್, ಮ್ಯಾನುಫ್ಯಾಕ್ಚರಿಂಗ್ ಆಂಡ್ ಎರ‍್ಜಿ ಇಂಜಿನಿಯರಿಂಗ್' ಹಾಗೂ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಭಾಗದ ವತಿಯಿಂದ 'ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಆನ್ ಮೆಟೀರಿಯಲ್ಸ್ ಸೈನ್ಸ್ ಆಂಡ್ ಮ್ಯಾತಮೆಟಿಕ್ಸ್ ಫಾರ್ ಎಡ್ವಾನ್ಸ್ಡ್ ಟೆಕ್ನಾಲಜಿ' ಎಂಬ ವಿವಿಧ ವಿಷಯಗಳ ಬಗೆಗೆ ಒಟ್ಟು ೭ ಕಾನ್ಫರೆನ್ಸ್ ಗಳನ್ನು ಹಮ್ಮಿಕೊಳ್ಳಲಾಗಿದೆ.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಎನ್ ವಿನಯ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಲ್ಟಿ ಕಾನ್ಫರೆನ್ಸ್‍ ನ ಉದ್ಘಾಟನಾ ಸಮಾರಂಭದಕ್ಕೆ ಅಮೆರಿಕದ ರ‍್ಡು ವಿಶ್ವವಿದ್ಯಾಲಯದ ಮಲ್ಟಿಫೇಸ್ & ಫ್ಯೂಯೆಲ್ ಸೆಲ್ ರಿರ‍್ಚ್ ಲ್ಯಾಬ್ಸ್ ನ ನರ‍್ದೇಶಕ ಪ್ರೊ. ಡಾ. ಶ್ರೀಪಾದ್ ಟಿ. ರೆವಣ್ಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಎಸ್ ಮೂಡಿತ್ತಾಯ, ಟೆಕ್ನಿಕಲ್ ಎಜುಕೇಶನ್ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೆರಾಯ, ಆಟೋಲಿವ್ ಸಂಸ್ಥೆಯ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ಕಿರಣ್ ಶೀಲಾವಂತ್, ಎಲ್&ಟಿ ಸಂಸ್ಥೆಯ ಸಲಹೆಗಾರ ನಿರಂಜನ್ ಸಿಂಹ ಮತ್ತು ಜಪಾನ್ ನ ನಿಡೆಕ್ ಸಂಸ್ಥೆಯ ಜನರಲ್ ಮ್ಯಾನೇಜರ್ ತಕಶಿ ಮಿಯಸಕ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು. ಈ ಎರಡು ದಿನಗಳ ಕಾನ್ಫರೆನ್ಸ್ ನ ಅವಧಿಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರುವಾಸಿಯಾದ ವಿವಿಧ ವಿಭಾಗಗಳ 20 ಸಾಧಕರು ದಿಕ್ಸೂಚಿ ಭಾಷಣಗಳನ್ನು ನಡೆಸಲಿರುವರು. ಸಂಶೋಧಕರಿಂದ 600 ಗುಣಮಟ್ಟದ ಸಂಶೋಧನಾ ಪ್ರಬಂಧಗಳು ಬಂದಿದ್ದು ತಜ್ಞರ ಪರಿಶೀಲನೆಯ ಬಳಿಕ 260 ಪ್ರಬಂಧಗಳನ್ನು ಮಂಡನೆಗಾಗಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top