ಪವಿತ್ರ ಸಿ.ಜಿ ರವರಿಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ ಪ್ರದಾನ

Upayuktha
0



ಚಿಕ್ಕಮಗಳೂರು : ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕು.ಪವಿತ್ರ.ಸಿ.ಜಿ ರವರು ಪ್ರೊ.ಶಿವಾನಂದ ಕೆಳಗಿನಮನಿಯವರ ಮಾರ್ಗದರ್ಶನದಲ್ಲಿ "ಆಧುನಿಕ ಕನ್ನಡ ಕಾದಂಬರಿಗಳಲ್ಲಿ ಅಲಕ್ಷಿತ ಮಹಿಳೆಯರು : ಸಾಂಸ್ಕೃತಿಕ ಅಧ್ಯಯನ (ಪ್ರಾತಿನಿಧಿಕ)" ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇದಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿ ನೀಡಿ ಗೌರವಿಸಿದೆ.




ಪವಿತ್ರರವರು ಕನ್ನಡ ಎಂಎ ಪದವಿಯನ್ನು ಪ್ರಥಮ ರ‍್ಯಾಂಕ್ ನೊಂದಿಗೆ ಉತ್ತೀರ್ಣರಾಗಿ ಚಿನ್ನದ ಪದಕವನ್ನು ಪಡೆದಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಯಶೋಧ.ಟಿ ರವರ ಮಗಳಾಗಿದ್ದು ಇವರಿಗೆ ಕುಟುಂಬದವರು ಹಾಗೂ ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕ ವೃಂದ, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top