ಮೈ ಭಾರತ್ ಪೋರ್ಟಲ್‌ಗೆ ನೋಂದಣಿ ಅಭಿಯಾನ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಮೈ ಭಾರತ್ ಪೋರ್ಟಲ್‌ಗೆ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳು ಹಾಗೂ ಸ್ವಯಂಸೇವಕರ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಾದೇಶಿಕ ನಿರ್ದೇಶನಾಲಯದ ನಿರ್ದೇಶಕ ಡಿ. ಕಾರ್ತಿಗೇಯನ್, ಸುಮಾರು 200 ಸ್ವಯಂಸೇವಕ ಹಾಗೂ ಸೇವಕಿಯರ ಸಾಮೂಹಿಕ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಣಿ ಮಾಡುತ್ತಿರುವುದರ ಉದ್ದೇಶ ಹಾಗೂ ಪ್ರಯೋಜನಗಳ ಬಗ್ಗೆ ವಿವರಣೆ ನೀಡಿದರು. 


ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು. ನೋಂದಣಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಪ್ರೊ. ಲತಾ ಎ. ಪಂಡಿತ್ ವಹಿಸಿದ್ದರು. 



ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಡಾ. ಲೊಕೇಶನಾಥ್ ಮೈ ಭಾರತ್ ಪೋರ್ಟಲ್‌ನಲ್ಲಿ ಸಾಮೂಹಿಕ ನೋಂದಣಿ ಕುರಿತು ತರಬೇತಿ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ., ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಸುರೇಶ್ ಸಹ ಯೋಜನಾಧಿಕಾರಿ ನಿಧಿಶ್ರೀ ಉಪಸ್ಥಿತರಿದ್ದರು. 


Post a Comment

0 Comments
Post a Comment (0)
Advt Slider:
To Top