ತೆಂಕನಿಡಿಯೂರು ಕಾಲೇಜಿನಲ್ಲಿ “ದರ್ಶನ” ವಾರ್ಷಿಕ ಸಂಚಿಕೆ ಬಿಡುಗಡೆ

Upayuktha
0



ಉಡುಪಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2022-23ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ “ದರ್ಶನ”ವನ್ನು ಲಯನ್ಸ್ ಕ್ಲಬ್ ಅಮೃತ್ ಉಡುಪಿ ಇವರ ಸಹಯೋಗದಲ್ಲಿ ಅಮೃತ ಗಾರ್ಡನ್ ಅಂಬಾಗಿಲು ಇಲ್ಲಿ  ಡಿ.01 ರಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಯಶಪಾಲ್ ಎ. ಸುವರ್ಣ ಅವರು ಬಿಡುಗಡೆಗೊಳಿಸಿದರು. 




ಈ ಸಂದರ್ಭದಲ್ಲಿ ಅವರು “ ಯುವ ಮನಸ್ಸುಗಳು ಸೃಜನತ್ಮಕವಾಗಿ ಹಾಗೂ ರಚನಾತ್ಮಕವಾಗಿ ಆಲೋಚಿಸುವಂತೆ ಮಾಡುವಲ್ಲಿ ಉನ್ನತ ಶಿಕ್ಷಣದ ಪಾತ್ರ ಮಹತ್ವದ್ದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು  ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸ್ಸನ್ನು ನನಸಾಗಿಸುತ್ತಾ ಬಂದಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ. ಸುರೇಶ್ .ರೈ.ಕೆ ಕಾಲೇಜು ವಾರ್ಷಿಕ ವಿಶೇಷಾಂಕ ದರ್ಶನವನ್ನು ಹೊರತರುವಲ್ಲಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. 




ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರೋತ್ಸಾಹಕರಾದ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಹೆಚ್.ಎಸ್, ಉದ್ಯಮಿಗಳಾದ ಎಂ.ಸಿ ಚಂದ್ರಶೇಖರ್ ಹಾಗೂ ಪಿ.ಹೆಚ್.ಡಿ ಪದವಿ ಗಳಿಸಿದ ಆಂಗ್ಲಭಾಷಾ ಸಹ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ಇವರನ್ನು ಗೌರವಿಸಲಾಯಿತು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವಕರ್,  ದರ್ಶನದ ಸಂಪಾದಕರಾದ ಕೃಷ್ಣ ಸಾಸ್ತಾನ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಕೃಷ್ಣ, ಡಾ. ರಾಘವ ನಾಯ್ಕ್ , ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕøತಿಕ ಸಮಿತಿ ಸಂಚಾಲಕರಾದ ಶ್ರೀಮತಿ ರತ್ನಮಾಲಾ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್, ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿ ಪ್ರಕಾಶ ಕಾರ್ಯಕ್ರಮ ನಿರ್ವಹಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top