ಪೊಳಲಿಯಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ ಸಮಾರಂಭ

Upayuktha
0


ಪೊಳಲಿ: ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪವಿತ್ರ ಮಂತ್ರಾಕ್ಷತೆ ವಿತರಣಾ ಮಂಗಳೂರು ಗ್ರಾಮಾಂತರ ಸಮಿತಿಯ ನೇತೃತ್ವದಲ್ಲಿ ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ವಿತರಣಾ ಕಾರ್ಯಕ್ರಮವು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಿಕ್ಕ್ಸೂಚಿ ಭಾಷಣ ಮಾಡಿ, ವಜ್ರದೇಹಿ ಮಠದ ಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top