ವಿದ್ಯಾರ್ಥಿಗಳು ಸಮಾಜಸೇವೆಯಿಂದ ಸಾಮಾಜಿಕ ಋಣ ತೀರಿಸಲು ಸಾಧ್ಯ : ಪ್ರಕಾಶ್ ಮೂಲತ್ವ

Upayuktha
0



ಸುರತ್ಕಲ್ : ವಿದ್ಯಾರ್ಥಿಗಳು ಸಮಾಜಸೇವೆ ಮೂಲಕ ಸಾಮಾಜಿಕ ಋಣವನ್ನು ತೀರಿಸಿಕೊಳ್ಳ ಬೇಕಾಗಿದೆ. ಪ್ರತಿ ವರ್ಷ ಶ್ರೇಷ್ಠ ಸಮಾಜ ಸೇವಾ ಸಾಧಕರನ್ನು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯವನ್ನು ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿದೆ ಎಂದು ಮೂಲತ್ವ ಪೌಂಡೇಷನ್ ಚಾರಿಟೇಬಲ್ ಟ್ರಸ್ಟ್‍ನ ಸಂಸ್ಥಾಪಕ ಪ್ರಕಾಶ್ ಮೂಲತ್ವ ನುಡಿದರು. 





ಅವರು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರೊಂದಿಗೆ ಸಂವಾದ ನಡೆಸಿದರು.




ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ಮಾತನಾಡಿ ಸಾಧಕ ಸಮಾಜಸೇವಕರ ಜೀವನ ಕಾರ್ಯಗಳನ್ನು ಅರಿತು ವಿದ್ಯಾರ್ಥಿಗಳು ಆದರ್ಶವನ್ನಾಗಿಸಿಕೊಳ್ಳಬೇಕಾಗಿದೆ ಎಂದರು.




ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಕ್ಷತಾ ವಿ.ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಭಾಗ್ಯಲಕ್ಷ್ಮಿ ಎಂ.  ಉಪಸ್ಥಿತರಿದ್ದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)
To Top