ಸುರತ್ಕಲ್ : ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸೃಜನಶೀಲ ನಾವೀನ್ಯತೆಗಳಿಗೆ ಹೆಚ್ಚಿನ ಆದ್ಯತೆಯಿದ್ದು ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳೊಂದಿಗೆ ಜ್ಞಾನ ಪರಿಧಿಯನ್ನು ವಿಸ್ತರಿಸಿಕೊಳ್ಳಬೇಕೆಂದು ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರತ್ನಾಕರ ರಾವ್ ವೈ.ವಿ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಮತ್ತು ಉದ್ಯಮಶೀಲತಾ ಅಭಿವೃದ್ಧಿ ವೇದಿಕೆಯ ಸಹಯೋಗದಲ್ಲಿ ನಡೆದ ಇನ್ನೋವೇಷಿಯಾ 2023-24 ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಉದ್ಘಾಟನೆ ನೆರವೇರಿಸಿದ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮಿ.ಪಿ ಮಾತನಾಡಿ ವಾಣಿಜ್ಯ ಶಾಸ್ತ್ರದ ಶಿಕ್ಷಣಾರ್ಥಿಗಳಿಗೆ ಔದ್ಯೋಗಿಕವಲಯದಲ್ಲಿ ಹೆಚ್ಚಿನ ಅವಕಾಶಗಳು ಲಭ್ಯವಿದ್ದು ಕೌಶಲ್ಯಾವರ್ಧನೆಯತ್ತ ಗಮನಹರಿಸ ಬೇಕೆಂದರು.
ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಕುಳಾಯಿ ಮಾತನಾಡಿ ನೂತನ ಶಿಕ್ಷಣ ನೀತಿಯಲ್ಲಿ ಪಠ್ಯಪೂರಕ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶಗಳಿದ್ದು ಅದರ ಸದುಪಯೋಗ ಪಡೆದುಕೊಳ್ಳ ಬೇಕೆಂದರು.
ಮೈಕ್ರೋ ಡಿಗ್ರಿ ಸಂಸ್ಥೆಯ ಮಾರ್ಕೆಟಿಂಗ್ ಲೀಡ್ ಪ್ರಜ್ವಲ್ ಸಂಪನ್ಮೂಲವ್ಯಕ್ತಿಗಳಾಗಿದ್ದರು. ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ ಆಧುನಿಕ ಕಾಲದಲ್ಲಿ ಉದ್ಯಮ ಶೀಲತೆಯತ್ತ ವಿದ್ಯಾರ್ಥಿಗಳು ಗಮನ ಹರಿಸುವ ಮೂಲಕ ಔದ್ಯೋಗಿಕ ರಂಗಕ್ಕೆ ಕೊಡುಗೆ ನೀಡ ಬಹುದಾಗಿದೆಂದರು. ಉಪಪ್ರಾಂಶುಪಾಲ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಭಟ್ ಎಸ್.ಜಿ ಶುಭ ಹಾರೈಸಿದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಪ್ರೊ.ಹರೀಶ್ ಆಚಾರ್ಯ, ಎಂ.ಕಾಂ. ವಿಭಾಗದ ಮುಖ್ಯಸ್ಥ ಡಾ. ಗಣೇಶ ಆಚಾರ್ಯ, ವಾಣಿಜ್ಯ ವಿಭಾಗದದ ಮುಖ್ಯಸ್ಥೆ ಡಾ. ಸೌಮ್ಯ ಪ್ರವೀಣ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ಸಂಯೋಜಕರಾದ ಡಾ. ಭಾಗ್ಯಲಕ್ಷ್ಮಿ ಎಂ., ಶಿಲ್ಪಾರಾಣಿ ಕೆ., ಪ್ರಾಧ್ಯಾಪಕರಾದ ಧನ್ಯ ಕುಮಾರ್, ಡಾ.ಪ್ರಶಾಂತ್ ಎಂ, ಪುನಿತಾ ಆರ್., ಭಾರತಿ, ಹರ್ಷರಾಣಿ, ದೀಕ್ಷಾ, ಪ್ರಕೃತಿ, ಆಪೇಕ್ಷಾ ಮತ್ತಿತರರು ಉಪಸ್ಥಿತರಿದ್ದರು. ಪೂರ್ವಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ತಯಾರಿಸಿರುವ ನೂತನ ಉತ್ಪನ್ನಗಳ ಪ್ರದರ್ಶನ ನೆರವೇರಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ