ರಕ್ತಕ್ಕೆ ಪರ್ಯಾಯವಿಲ್ಲ: ಡಾ.ಭಾಸ್ಕರ್.ಎಸ್

Upayuktha
0



ಪುತ್ತೂರು: ರಕ್ತಕ್ಕೆ ಪರ್ಯಾಯವಿಲ್ಲ, ಅನಿವಾರ್ಯ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ರಕ್ತದಾನ ಮಾಡಿದಾಗ ಒಂದು ಜೀವ ಉಳಿಸಿದ ತೃಪ್ತಿ ಸಿಗುತ್ತದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ್.ಎಸ್ ಹೇಳಿದರು.




ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕ, ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಎಡ್‍ಡಿಎಫ್‍ಸಿ ಬ್ಯಾಂಕ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಎಲೈಟ್ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. 




ರಕ್ತದ ಆವಶ್ಯಕತೆ ಯಾರಿಗೆ ಯಾವ ಸಂದರ್ಭದಲ್ಲಿ ಬರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ ಇಂತಹ ಸಂದರ್ಭದಲ್ಲಿ ರಕ್ತ ನಿಧಿ ಕೇಂದ್ರಗಳು ಸಂಜೀವಿನಿಯಂತೆ ಕೆಲಸ ಮಾಡುತ್ತವೆ ಎಂದರು. ಆರೋಗ್ಯ ಮಾನವನು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ತನ್ನ ಜೀವಿತಾವಧಿಯಲ್ಲಿ 60 ಬಾರಿ ರಕ್ತದಾನ ಮಾಡಿದ ವ್ಯಕ್ತಿಗಳು ನಮ್ಮ ಸುತ್ತಮುತ್ತ ಇದ್ದಾರೆ ಎಂದರು. ಸಮಾಜಕ್ಕೆ ಯಾವ ರೀತಿಯಿಂದಾದರೂ ಒಳಿತನ್ನು ಮಾಡಬಹುದು ಅದರಲ್ಲಿ ರಕ್ತದಾನವೂ ಒಂದು ಎಂದು ನುಡಿದರು.





ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ ರಕ್ತ ದಾನ ಶ್ರೇಷ್ಟವಾದದ್ದು. ವ್ಯಕ್ತಿಯೊಬ್ಬನ ಜೀವ ಉಳಿಸುವ ಮಹತ್ಕಾರ್ಯದಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದರು. ಸಂಸ್ಥೆಯ ಆಶಯದಂತೆ ಸಮಾಜಕ್ಕೆ ಒಳಿತನ್ನುಂಟುಮಾಡುವ ಕಾರ್ಯದಲ್ಲಿ ಕಾಲೇಜು ಸದಾ ಮುಂಚೂಣಿಯಲ್ಲಿರುತ್ತದೆ ಎಂದರು.




ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ಮಂಗಳೂರು ಎಡ್‍ಡಿಎಫ್‍ಸಿ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಭಾಗ್ಯಶ್ರೀ,  ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಪುತ್ತೂರು ಎಲೈಟ್‍ನ ಪದಾಧಿಕಾರಿಗಳಾದ ಲಾರೆನ್ಸ್ ಗೊನ್ಸಾಲ್ವಿಸ್, ಜಾನ್ ಕುಟಿನ್ಹೋ, ವಿಕ್ಟರ್ ಮಾರ್ಟಿಸ್, ದಯಾನಂದ.ಕೆ.ಎಸ್, ಜೈರಾಜ್ ಭಂಡಾರಿ, ದತ್ತಾತ್ರೇಯ, ಸುಬ್ಬಪ್ಪ ಕೈಕಂಬ ಅಬ್ದುಲ್ ರಝಾಕ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.




ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಉಸ್ತುವಾರಿ ಡಾ.ಆಂಟನಿ ಸ್ವಾಗತಿಸಿ ಪ್ರಸ್ತಾವನೆಗೈದರು.  ಕಾಲೇಜಿನ ಯೂತ್ ರೆಡ್‍ಕ್ರಾಸ್ ಘಟಕದ ಸಂಯೋಜಕ ಪ್ರೊ.ಅಭಿಷೇಕ್ ಕುಮಾರ್.ಕೆ ವಂದಿಸಿದರು. ವಿದ್ಯಾರ್ಥಿನಿ ಚೈತ್ರಾ ಕಾರ್ಯಕ್ರಮ ನಿರ್ವಹಿಸಿದರು.




ಒಟ್ಟು 125 ವಿದ್ಯಾರ್ಥಿಗಳು ರಕ್ತದಾನ ಮಾಡಿದ್ದು, 53 ಯುನಿಟ್ ರಕ್ತವನ್ನು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರಕ್ಕೆ ಹಾಗೂ 72 ಯೂನಿಟ್ ರಕ್ತವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಕೇಂದ್ರಕ್ಕೆ ನೀಡಲಾಯಿತು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   





Post a Comment

0 Comments
Post a Comment (0)
Advt Slider:
To Top