ಬೊಮ್ಮರ ಬೆಟ್ಟು -ವಿಕಸಿತ ಭಾರತ ಸಂಕಲ್ಪ ಯಾತ್ರೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

Upayuktha
0

ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಭಾರತದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಭಾರತದಾದ್ಯಂತ   "ವಿಕಸಿತ ಭಾರತ ಸಂಕಲ್ಪ ಯಾತ್ರೆ" ನಡೆಯುತ್ತಿದ್ದು, ಸರ್ಕಾರಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ,ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾಪು ಶಾಸಕ, ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.


ಅವರು ಶುಕ್ರವಾರ  ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.


ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ  ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು.


ಇದೇ ಸಂದರ್ಭದಲ್ಲಿ ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ವಿತರಿಸಿದರು.


ಕಾರ್ಯಕ್ರಮದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೆನರಾ ಬ್ಯಾಂಕ್ ನ ಹಿರಿಯಡಕ ಶಾಖೆಯ ಪ್ರಬಂಧಕರಾದ ಅವಿನಾಶ್ ಕಿಣಿ, ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top