ಡಿಸೆಂಬರ್ 5-6: ಉಡುಪಿ ಜಿಲ್ಲಾ 16ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Upayuktha
0

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 5 ಮತ್ತು 6 ರಂದು ಕೋಟ ವಿವೇಕ ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. 


ಡಿ. 5 ರಂದು ಬೆಳಗ್ಗೆ 10.15 ಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಶೋಧಕ ಹಾಗೂ ವಿದ್ವಾಂಸ ಬಾಬುಶಿವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.


ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್‌ಕರ್ ಸಾಂಸ್ಕೃತಿಕ ಕಾರ್ಯಕ್ರಮದ ಅನಾವರಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿರುವರು. ಕೋಟ ವಿದ್ಯಾ ಸಂಘ (ರಿ) ಅಧ್ಯಕ್ಷ ಸಿಎ ಪಿ. ಪ್ರಭಾಕರ ಮಯ್ಯ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. 


ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಬ್ರಹ್ಮಾವರ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ, ವಿವೇಕ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಹಿರಿಯ ಸಂಶೋಧಕ ಎ.ವಿ ನಾವಡ,  ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. 


ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 9.15 ಕ್ಕೆ ಸಾಲಿಗ್ರಾಮ ಗುರುನರಸಿಂಹನ ಸಾನಿಧ್ಯದಿಂದ ವಿವೇಕ ವಿದ್ಯಾಲಯದವರೆಗೆ ನಡೆಯುವ ಪುರಮೆರವಣಿಗೆಗೆ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್. ಕಾರಂತ ಚಾಲನೆ ನೀಡಲಿದ್ದಾರೆ.

 

ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿ. 6 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದ್ದು, ಸಮಾರೋಪದ ಭಾಷಣವನ್ನು ಸಾಹಿತ್ಯಿಕ ಚಿಂತಕ ರಾಘವೇಂದ್ರ ರಾವ್ ಕಾಪು ಹಾಗೂ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top