ಉಡುಪಿ: ಡಿಸೆಂಬರ್ 17 ರಂದು ಹೊಸ ವರ್ಷದ ಡೈರಿ ಬಿಡುಗಡೆ

Upayuktha
0

 


ಉಡುಪಿ: ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತ ಗಸ್ತು ಅರಣ್ಯ ಪಾಲಕರು ಮತ್ತು ಅರಣ್ಯ ವೀಕ್ಷಕರು, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಡಿಸೆಂಬರ್ 17 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ.


ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಮಂಗಳೂರು ಕರ್ನಾಟಕ ಗೇರು ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕೆ. ಕಮಲ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ಉಡುಪಿ ಕೆ.ಸಿ.ಡಿ.ಸಿ ವಿಭಾಗೀಯ ವ್ಯವಸ್ಥಾಪಕ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ಕುಮಾರ್ ಜೋಗಿ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಭಾರ) ಕ್ಲಿಫರ್ಡ್ ಲೋಬೋ, ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ. ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಗೌರವಾಧ್ಯಕ್ಷ ಎಚ್ ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top