ಉಡುಪಿ ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ 11057.6 ಕೋಟಿ ರೂ. ಸಾಲ ಯೋಜನೆ ಗುರಿ ನಿಗದಿ: ಡಾ. ಕೆ ವಿದ್ಯಾಕುಮಾರಿ

Upayuktha
0


ಉಡುಪಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ 11057.6 ಕೋಟಿ ರೂ. ಗಳನ್ನು ಆದ್ಯತಾ ವಲಯಕ್ಕೆ ಸಾಲ ಯೋಜನೆಯನ್ನು ನೀಡುವ ಗುರಿ ಹೊಂದಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.


ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಬಾರ್ಡ್ ವತಿಯಿಂದ ಹೊರತಂದಿರುವ ಪೊಟೆನ್ಶಿಯಲ್ ಲಿಂಕ್ಡ್ ಕ್ರೆಡಿಟ್ ಪ್ಲಾನ್ 2024-25 ನೇ ಸಾಲಿನ ಪುಸ್ತಕ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.


ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲು ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲು ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ 2024-25 ನೇ ಸಾಲಿಗೆ 11057.6 ಕೋಟಿ ರೂ. ಸಾಲ ನೀಡಲು ಉದ್ದೇಶಿಸಿದ್ದು, ಇದರಲ್ಲಿ ಶೇ. 48.30 ಯಷ್ಟು ಕೃಷಿ ಚಟುವಟಿಕೆಗಳಿಗೆ ಸಾಲ ನೀಡಲು ಮೀಸಲಿರಿಸಿದರೆ, ಸೂಕ್ಷ್ಮ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಶೇ.33.30 ರಷ್ಟು, ವಸತಿ ಯೋಜನೆಗೆ ಶೇ.7.35 ರಷ್ಟು ಶಿಕ್ಷಣಕ್ಕೆ ಶೇ. 1.25 ರಷ್ಟು, ಆದ್ಯತಾ ವಲಯಕ್ಕೆ ಶೇ. 5.75 ರಷ್ಟು, ಸಾಮಾಜಿಕ ಅಭಿವೃದ್ಧಿಗೆ ಶೇ. 0.80 ರಷ್ಟು, ರಫ್ತು ಸಾಲ ಶೇ. 2.75 ರಷ್ಟು, ವಲಯವಾರು ಸಾಲದ ಪ್ರಮಾಣ ಅಂದಾಜು ಪಡಿಸಿದೆ ಎಂದರು.


ನಬಾರ್ಡ್ ಗ್ರಾಮೀಣ ಜನತೆಗೆ ಸಮೃದ್ಧ ಹಾಗೂ ಸುಸ್ಥಿರ ಜೀವನವನ್ನು ನಡೆಸಲು ಅವಕಾಶವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಬಾರ್ಡ್ ಬ್ಯಾಂಕ್ ಸಂಗೀತಾ ಕಾರ್ಥಾ, ಕರ್ನಾಟಕ ಬ್ಯಾಂಕ್‍ನ ರೀಜನಲ್ ಮ್ಯಾನೆಜರ್ ರಾಜಗೋಪಾಲನ್, ಎಸ್.ಬಿ.ಐ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಶೀಬಾ ಸೆಹೆಜಾನ್, ಶೋಭಲತಾ, ರಾಜ್ ಗೋಪಾಲ್, ಯೂನಿಯನ್ ಬ್ಯಾಂಕ್‍ನ ಡಿ.ಆರ್.ಎಮ್ ಶಿವಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಪಿ.ಎಂ. ಪಿಂಜಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top