ಉಡುಪಿ: ಕೌಶಲ್ಯಾಧಾರಿತ ತರಬೇತಿ ಸಮಾರೋಪ ಸಮಾರಂಭ

Upayuktha
0


ಉಡುಪಿ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಮತ್ತು ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಿಲಿಟಿ (ಎ.ಪಿ.ಡಿ) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗ ಪೂರ್ವ ಮಾಹಿತಿ ಶಿಬಿರದ ಸಮಾರೋಪ ಸಮಾರಂಭವು ಇಂದು ನಗರದ ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯುದ್ಧದ ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಇನ್ನಿತರ ತುರ್ತು ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿದೆ. ರೆಡ್‌ಕ್ರಾಸ್ ಸಂಸ್ಥೆಯು ವಿಕಲಚೇತನರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ತಯಾರಿಸಿ, ವಿತರಿಸುತ್ತಿದ್ದು, ವಿಕಲಚೇತನರ ಶ್ರೇಯೋಭಿವೃದ್ಧಿಗೆ ಸ್ಪಂದಿಸುವುದು ಸಂಸ್ಥೆಯ ಆದ್ಯ ಕರ್ತವ್ಯವಾಗಿದೆ ಎಂದರು. 


ವಿಕಲಚೇತನರು ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ಪಡೆದು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅವರುಗಳಿಗೆ ಅನುಕಂಪ ತೋರದೇ ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

 

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಮಾತನಾಡಿ, ಅಂಗವಿಕಲರು ಮನೆಯೊಳಗೆ ಸೀಮಿತವಾಗಿರದೇ, ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಇಲಾಖೆ ಹಾಗೂ ಸಂಘ-ಸAಸ್ಥೆಗಳ ವತಿಯಿಂದ ನೀಡಲಾಗುವ ತರಬೇತಿಗಳ ಸದುಪಯೋಗವನ್ನು ಪಡೆದುಕೊಂಡು ತಮ್ಮ ಜೀವನವನ್ನು ತಾವು ನಡೆಸಲು ಮುಂದಾಗಬೇಕು ಎಂದರು.


ಸಂಪನ್ಮೂಲ ವ್ಯಕ್ತಿಯಾಗಿ ಡಿ.ಡಿ.ಡಬ್ಲೂö್ಯ.ಓ ನಿವೃತ್ತ ಅಧಿಕಾರಿ ನಿರಂಜನ್ ಭಟ್ ಮಾತನಾಡಿ, ವಿಕಲಚೇತನರು ಅಂಗವಿಕಲತೆಯ ಬಗ್ಗೆ ಕೀಳರಿಮೆ ಹೊಂದದೇ ತಮ್ಮ ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ನಾವು ಅಂಗವಿಕಲರು ಎಂಬುದನ್ನು ಮನಸ್ಸಿನಿಂದ ತೊರೆದು, ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎ.ಪಿ.ಡಿ ಸಂಸ್ಥೆಯು ವಿಕಲಚೇತನರನ್ನು ಮಾನಸಿಕವಾಗಿ ಸದೃಢರನ್ನಾಗಿ ಮಾಡಿ, ಅವರುಗಳ ಬದುಕನ್ನು ರೂಪಿಸಲು ನೆರವಾಗುತ್ತಿದ್ದು, ತರಬೇತಿ ಪಡೆದ ಶಿಬಿರಾರ್ಥಿಗಳು ಸ್ವಾವಲಂಭಿಗಳಾಗಿ ಜೀವನ ರೂಪಿಸಿಕೊಳ್ಳಬೇಕು ಎಂದರು.


ಎಪಿಡಿ ಸಂಸ್ಥೆಯ ಜಿಲ್ಲಾ ಯೋಜನಾ ಸಂಯೋಜಕ ಹರೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆ ಮತ್ತು ಸಂಸ್ಥೆಯ ಸಹಯೋಗದಲ್ಲಿ ನಡೆದ ಉದ್ಯೋಗ ಪೂರ್ವ ತರಬೇತಿಯ ಶಿಬಿರಾರ್ಥಿಗಳು ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉದ್ಯೋಗಾಕಾಂಕ್ಷಿಗಳಾಗಿ ಸ್ವಾವಲಂಭಿ ಜೀವನ ನಡೆಸಲು ಈ ತರಬೇತಿಯು ಉತ್ತಮ ವೇದಿಕೆಯಾಗಿದೆ. ತರಬೇತಿ ಪಡೆದ ಫಲಾನುಭವಿಗಳಿಗೆ ಸ್ಥಳೀಯ ಮಟ್ಟದಲ್ಲಿ ಖಾಲಿ ಇರುವ ಕ್ಷೇತ್ರಗಳಲ್ಲಿ ಉದ್ಯೋಗ ದೊರಕಿಸಿಕೊಡಲಾಗುವುದು ಎಂದರು. 


ಇದೇ ಸಂದರ್ಭದಲ್ಲಿ  ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕವನ್ನು ವಿತರಿಸಲಾಯಿತು. 


ಎಪಿಡಿ ಸಂಸ್ಥೆಯ ನೇಮಕಾತಿ ಅಧಿಕಾರಿ ಶ್ರೀಧರ್, ಶಿಬಿರಾರ್ಥಿಗಳು, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತರಬೇತುದಾರರಾದ ಸುನೀತಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top