ಉಡುಪಿ: ಇಂದು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆ

Upayuktha
0


ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ -2024 ರ ಅಂಗವಾಗಿ ರಾಜ್ಯ ಮಟ್ಟದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆಗಳನ್ನು ಡಿಸೆಂಬರ್ 28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯ K-SWAN ವೀಡಿಯೋ ಕಾನ್ಫ್‍ರೆನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗುತ್ತಿದೆ.


ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರೌಢಶಾಲೆ, ಪದವಿ ಪೂರ್ವ/ ಪಾಲಿಟೆಕ್ನಿಕ್/ ತತ್ಸಮಾನ ಹಾಗೂ ಪದವಿ/ ತಾಂತ್ರಿಕ/ ವೈದ್ಯಕೀಯ ಕಾಲೇಜು/ ಸ್ನಾತಕೋತ್ತರ ಕೇಂದ್ರದ ಈ ಮೂರು ವಿಭಾಗಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ವಿಜೇತರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ -2024 ರ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಮಾಣಪತ್ರದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top