ಉಡುಪಿ: ನಾಳೆ ವಿಶ್ವ ಮಾನವ ದಿನಾಚರಣೆ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 29 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.


ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top