ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ಗಳ ಜಂಟಿ ಆಶ್ರಯದಲ್ಲಿ ಡಿ.10ರಂದು ಭಾನುವಾರ ಕುಂಬಳೆ ಸಮೀಪದ ನಾರಾಯಣಮಂಗಲದಲ್ಲಿ ಗುರುನಮನ, ಸನ್ಮಾನ, 70 ಕವಿ ಮನಸ್ಸುಗಳ ಸಮಾಗಮ ನಡೆಯಲಿದೆ.
ಅಂದು ಬೆಳಗ್ಗೆ 10ರಿಂದ ಸಂಜೆ 4ರ ತನಕ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕವಿ, ಶಿಕ್ಷಣತಜ್ಞ, ಸಂಘಟಕ, ವಿಶ್ರಾಂತ ಅಧ್ಯಾಪಕ ವಿ. ಬಿ. ಕುಳಮರ್ವ-70 ಸಾಹಿತ್ಯೋತ್ಸವ ನಡೆಯಲಿದೆ.
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾರ್ಯಕ್ರಮ ಸಂಯೋಜಕ ಆನಂದ ರೈ ಅಡ್ಕಸ್ಥಳ ಹಾಗೂ ದ.ಕ ಜಿಲ್ಲಾ ಚುಸಾಪ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಮತ್ತು ಕಾರ್ಯಕ್ರಮ ಸಂಯೋಜಕ ಗೋಪಾಲಕೃಷ್ಣ ಶಾಸ್ತ್ರಿ ಮಂಗಳೂರು ಅವರು ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಂಶುಪಾಲರಾದ ಪ್ರೊಫೆಸರ್ ಪಿ.ಎನ್ ಮೂಡಿತ್ತಾಯ ಅವರು ವಹಿಸಲಿದ್ದು ಕವಿಗೋಷ್ಠಿ ಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ಕಿರುಪರಿಚಯದೊಂದಿಗೆ ನಾಳೆ ದಿನಾಂಕ (02/12/2023 ಶನಿವಾರ ದೊಳಗಾಗಿ ಕಾರ್ಯಕ್ರಮದ ಸಂಯೋಜಕರಾದ ಆನಂದ ರೈ ಅಡ್ಕಸ್ಥಳ (ಮೊ :9483474325) ಯವರಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಸಂಘಟಕರು ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ