ಸಜಿಪ ನಡುವಿನಲ್ಲಿ ವಿಕಸಿತ ಭಾರತ ಯಾತ್ರೆ ಕಾರ್ಯಕ್ರಮ

Upayuktha
0


ಸಜಿಪ ನಡು: ಕೇಂದ್ರ ಸರ್ಕಾರದ ಯೋಜನೆಗಳನ್ನು ಕಡೆಯ ಮೈಲಿಯವರೆಗೂ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಇಂದು ಸಜಿಪನಡುವಿಗೆ ಆಗಮಿಸಿತು.


ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್‌ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ, ಡಾ. ಮಲ್ಲಿಕಾರ್ಜುನ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಾಗೇಶ್, ಕೆನರಾ ಲೀಡ್ ಬ್ಯಾಂಕ್ ಮ್ಯಾನೇಜರ್ ಶ್ರೀಮತಿ ಕವಿತಾ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ರೀಮತಿ ತಾರಾ, ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಮತ್ತಿತರರು ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಕೆನರಾ ಬ್ಯಾಂಕಿನ ಅಧಿಕಾರಿ ರಾಖಿ ಜಯದಾಸ್ ಕಾರ್ಯಕ್ರಮ ಸಂಯೋಜಿಸಿ ಬ್ಯಾಂಕಿನ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.



ಉಡುಪಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ ಉಡುಪಿಯ ಮಣಿಪುರಕ್ಕೆ ಆಗಮಿಸಿದಾಗ  ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಯಾತ್ರಾ ವಾಹನವನ್ನು ಸ್ವಾಗತಿಸಿದರು. ಉಡುಪಿ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಎಂ ಪಿಂಜಾರ್ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು ಮಣಿಪುರ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರ ಕೆ. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಶೆಟ್ಟಿ ಎಫ್ ಎಲ್ ಸಿ ಕೌನ್ಸಿಲರ್ ಮೀರಾ ಜಿ.ಡೇ ನೋಡಲ್ ಆಫೀಸರ್ ಸರ್ವೇಶ್ ಆಚಾರ್ಯ ಉಪಸ್ಥಿತರಿದ್ದರು . ಕಾರ್ಯಕ್ರಮದಲ್ಲಿ ಸಂಕಲ್ಪ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು. ಫಲಾನುಭವಿಗಳುತಮ್ಮ ಅನುಭವ ವಿವರಿಸಿದರು. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top