ನೆಲ್ಲಿಕಾರು: ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ಕೂಡ ತ ತಲುಪಬೇಕು ಎನ್ನುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ದೇಶಾದ್ಯಂತ ಎಲ್ಲಾ ಪಂಚಾಯಿತಿಗಳಲ್ಲಿ ನಡೆಯುತ್ತಿದೆ. ಅದು ಮುದ್ರಾ ಯೋಜನೆ ಇರಬಹುದು ಪಿಎಂ ಎಸ್ ಬಿ ವೈ ಇರಬಹುದು ಎಲ್ಲಾ ಯೋಜನೆಗಳು ಜನರಿಗಾಗಿ ಇದ್ದು ಅದು ನಿಜವಾದ ಫಲಾನುಭವಿಗಳನ್ನು ತಲುಪಬೇಕು ಎಂದು ಸ್ಥಳೀಯ ನಾಯಕ ಸುನಿಲ್ ಪನಪಿಲ ಹೇಳಿದರು.
ಅವರು ದ. ಕ ದ ನೆಲ್ಲಿಕಾರಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಗಮಿಸಿದಾಗ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಯಾತ್ರಾ ವಾಹನವನ್ನು ಸ್ವಾಗತಿಸಿದರು. ನಾರಾವಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿ ಚಂದ್ರಪ್ರಕಾಶ್ ಕಾರ್ಯಕ್ರಮ ಸಂಯೋಜಿಸಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ನೆಲ್ಲಿಕಾರು ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಹೆಗ್ಡೆ, ಸುಶೀಲ, ಸ್ಥಳೀಯ ನಾಯಕರಾದ ಸುನಿಲ್ ಪನಪಿಲ, ಅಭಿಜಿತ್ ಜೈನ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕಿ ಮೃದುಲ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಕಲ್ಪ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು. ಯೋಜನೆಗಳ ಫಲಾನುಭವಿಗಳಾದ ಸತೀಶ್ ಹಾಗೂ ಕಾರ್ತಿಕ್ ಜೈನ್ ತಮ್ಮ ಅನುಭವ ವಿವರಿಸಿದರು. ವಿವಿಧ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಜೈನ್ ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ