ಮಂಗಳೂರು: 18 ವರ್ಷ ತುಂಬಿದ ನಂತರ ಸಾರ್ವತ್ರಿಕ ಮತದಾನ ಪದ್ಧತಿ ಪ್ರಕಾರ ಪ್ರತಿಯೊಬ್ಬರೂ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಹೀಗೆ ಮತದಾನ ಮಾಡುವ ಮುನ್ನಾ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ನಿಟ್ಟಿನಲ್ಲಿ ಯುವ ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಶಾಖೆಯ ಮತದಾನ ನೋಂದವಣಾಧಿಕಾರಿ ರೇಖಾ ಜೆ. ಶೆಟ್ಟಿ ವಿದ್ಯಾರ್ಥಿಗಳಿಗೆ ಮತದಾನ ನೋಂದಣಿ ಕುರಿತು ಜಾಗೃತಿ ಮೂಡಿಸಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ನಡೆದ ಯುವ ಮತದಾರರ ಮತ ಪಟ್ಟಿಗೆ ಸೇರ್ಪಡೆ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾನದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ವೋಟರ್ಸ್ ಹೆಲ್ಪ್ಲೈನ್ ಆಪ್ ಮೂಲಕ ಯುವ ಮತದಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಶಾಖೆಯ ಸಹಾಯಕ ನೋಂದವಣಾಧಿಕಾರಿ ದೇವೇಂದ್ರಪ್ಪ ಪರಾರಿ, ಸಹಾಯಕ ಕಂದಾಯ ಅಧಿಕಾರಿ ಜೇನುಕಲ್, ಕಂದಾಯ ಪರಿಶೀಲನಾ ಅಧಿಕಾರಿ ದೀಪಕ್ ಎಂ. ಎಸ್., ಬಿ.ಎಲ್.ಒ. ಮೇಲ್ವಿಚಾರಕ ದೊಡ್ಡ ನಂಜಯ್ಯ, ಕಂದಾಯ ನಿರೀಕ್ಷಕರಾದ ರಾಕೇಶ್, ಬಸವರಾಜ್ ತಳಕೇರಿ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರು ಡಾ. ಭಾರತಿ ಪಿಲಾರ್ ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ