ಉಜಿರೆ: ಎಸ್‌ಡಿಎಂ ಮಹಿಳಾ ಐಟಿಐಯಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಮಾಹಿತಿ ಕಾರ್ಯಕ್ರಮ

Upayuktha
0




ಉಜಿರೆ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಇಂದು (ಡಿ.2) ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಇಲ್ಲಿನ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಡಾ ಶ್ರುತಿ ಚಿಕ್ಕೊಂಡ್ ಇವರು ಏಡ್ಸ್ ಕುರಿತು ಮಾಹಿತಿ ನೀಡಿದರು. ಏಡ್ಸ್ ಕುರಿತು ಜಾಗೃತಿ ಮೂಡಿಸುವ ಹಾಗೂ ಏಡ್ಸ್ ತಡೆಗಟ್ಟುವುದು ಹೇಗೆ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.


ವೇದಿಕೆಯಲ್ಲಿದ್ದ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಇವರು ಮಾತನಾಡಿ, ಬದುಕು ಎಂಬುದು ಒಂದು ಕಲೆ ಇದರಲ್ಲಿ ನಾವು ಅನೇಕ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ನಮ್ಮ ಜೀವನಕ್ಕೆ ಪೂರಕವಾಗಿ ತೆಗೆದುಕೊಳ್ಳುವ ಮೂಲಕ ವೈಯಕ್ತಿಕ ಶಿಸ್ತು ಬೆಳೆಸಿಕೊಳ್ಳಬೇಕು. ಏಡ್ಸ್ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಇಲಿ ಜ್ವರ, ಮಂಗನ ಕಾಯಿಲೆ, ಕೋವಿಡ್-19 ಈ ಎಲ್ಲಾ ವಿಷಯಗಳು ಕುರಿತು ಜಾಗೃತಿ, ಅದೇ ರೀತಿ ಎಲ್ಲದಕ್ಕೂ ಆತ್ಮಸ್ಥೈರ್ಯ ಅತೀ ಅಗತ್ಯ ಎಂದು ಹೇಳಿದರು.


ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಯಾಗಿರುವ ಶ್ರೀಮತಿ ಸಂಧ್ಯಾ ಇವರು ಕಾರ್ಯಕ್ರಮ ನಿರೂಪಿಸಿದರು ಹಾಗೂ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು‌.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top