ಸುರತ್ಕಲ್ : ಸೂಕ್ತ ಮುಂಜಾಗೃತೆಯಿಂದ ಏಡ್ಸ್ ಕಾಯಿಲೆಯನ್ನು ನಿಯಂತ್ರಿಸಬಹುದಾಗಿದ್ದು ಪ್ರಸ್ತುತ ಕಾಲಘಟ್ಟದಲ್ಲಿ ಏಡ್ಸ್ ರೋಗಿಗಳ ಪ್ರಮಾಣ ಕಡಿಮೆಯಾಗುತ್ತಿದೆ. ಯುವ ಜನರು ಮಾರಕ ರೋಗಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ. ಕಿಶೋರ್ ಕುಮಾರ್ ಎಂ. ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್, ರೋಟರಾಕ್ಟ್ ಕ್ಲಬ್, ಯೂತ್ ರೆಡ್‍ಕ್ರಾಸ್ ಘಟಕ, ಮಹಿಳಾ ವೇದಿಕೆ ಮತ್ತು ಸುರತ್ಕಲ್ ಇನ್ನರ್‍ವೀಲ್ ಕ್ಲಬ್‍ಗಳ ಜಂಟಿ ಆಶ್ರಯದಲ್ಲಿ ನಡೆದ ಏಡ್ಸ್ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ.ಪಿ.ಕೃಷ್ಣಮೂರ್ತಿ ಮಾತನಾಡಿ ಸಾಕ್ಷರತಾ ಸಮಾಜವು ಅಭಿವೃದ್ಧಿಯಾದಂತೆ ಮಾರಕ ರೋಗಗಳ ಕುರಿತು ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್.ಜಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಅಕ್ಷತಾ ವಿ., ಡಾ. ಭಾಗ್ಯಲಕ್ಷ್ಮಿ ಎಂ., ಇನ್ನರ್‍ವೀಲ್ ಕ್ಲಬ್ ಸುರತ್ಕಲ್‍ನ ಅಧ್ಯಕ್ಷೆ ಸಾವಿತ್ರಿ ರಮೇಶ್ ಭಟ್, ರೋಟರಾಕ್ಟ್ ಕ್ಲಬ್‍ನ ಸಂಯೋಜಕಿ ಶಿಲ್ಪಾರಾಣಿ ಕೆ., ಯುವ ರೆಡ್‍ಕ್ರಾಸ್ ಘಟಕದ ಸಂಯೋಜಕರಾದ ಪೂರ್ಣಿಮಾ ಗೋಖಲೆ ಮತ್ತು ಅಶ್ವಿನ್ ಮಹಿಳಾ ವೇದಿಕೆಯ ಸಂಯೋಜಕಿ ಶ್ರೀದೇವಿ ಉಪಸ್ಥಿತರಿದ್ದರು.
ಏಡ್ಸ್ ಜಾಗೃತಿಯ ಬಗ್ಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು. ವರ್ಷಾ ಸ್ವಾಗತಿಸಿದರು. ತೇಜಸ್ವಿನಿ ನಿರೂಪಿಸಿ ಸಂಧ್ಯಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ