ತಿಪಟೂರು: ಸರ್ಕಾರದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ವಿತರಿಸುವ ಕುರಿತು ಮಾಹಿತಿಯನ್ನು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ವ್ಯಾಪ್ತಿಯ ಹಲವು ಸರ್ಕಾರಿ ಹಿರಿಯ ಹಾಗೂ ಕಿರಿಯ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಗಳಿಗೆ ನೀಡಲಾಯಿತು.
ಡಾ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರೌಢ ಶಾಲಾ ಶಿಕ್ಷಕ ನಿಜಗುಣಯ್ಯ ಹೆಚ್ ಎಸ್ ಹಾಗೂ MRP ಹಾಗೂ ಶಿಕ್ಷಕ ಸಂಜಯ್ ರವರು ಈ ಮಾಹಿತಿ ನೀಡಿದರು.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಈ ಮಾಹಿತಿ ಅಭಿಯಾನ ನಡೆಯುತ್ತಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ