ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಯು.ಟಿ.ಖಾದರ್

Upayuktha
0

ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪಂದ್ಯ



ಮಂಗಳೂರು: ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ'ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.


ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ಬಗ್ಗೆ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪದಾಧಿಕಾರಿಗಳಾದ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸಂದೇಶ್ ಜಾರ, ಸುಖ್ ಪಾಲ್ ಪೊಳಲಿ, ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top