ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕೆ. ಆರ್ ಯಶ್ವಿನ್ ಇತ್ತೀಚೆಗೆ ಕರ್ನಾಟಕ ಸರಕಾರದ ಕ್ರೀಡಾ ಇಲಾಖೆಯಿಂದ ಆಯೋಜಿಸಲ್ಪಟ್ಟ ಪದವಿ ಪೂರ್ವ ಬಾಲಕರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಮೆಚೂರ್ ಅಸೋಸಿಯೇಷನ್ ವತಿಯಿಂದ ನಡೆದ ಅನೇಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗಳಿಸಿರುವ ಅರಳು ಪ್ರತಿಭೆಯಾಗಿರುತ್ತಾರೆ.
ಇತ್ತೀಚೆಗೆ ಕರ್ನಾಟಕ ರಾಜ್ಯದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಬಾಲಕರ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಇವರ ಕ್ರೀಡಾ ಪ್ರೇಮಕ್ಕೆ ಸಾಕ್ಷಿ. ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ರಾಘವ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರರಾಗಿರುವ ಯಶ್ವಿನ್ ಕೊಳ್ತಿಗೆ ಗ್ರಾಮದ ಕಡಂಬು ಮನೆಯವರು.
ಸಂತ ಫಿಲೋಮಿನ ಕಾಲೇಜಿನ ಸ್ಪೋರ್ಟ್ಸ್ ಕೋಟಾದಲ್ಲಿ ಕಾಲೇಜಿಗೆ ಪ್ರವೇಶ ಪಡೆದು ನಿರಂತರ ಪರಿಶ್ರಮದಿಂದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುವುದು ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ರೆವೆರೆಂಡ್ ಫಾದರ್ ಅಶೋಕ ರಾಯನ ಕ್ರಾಸ್ತಾ ದೈಹಿಕ ನಿರ್ದೇಶಕರಾದ ರಾಜೇಶ್ ಮೂಲ್ಯ, ಎಲಿಯಾಸ್ ಪಿಂಟೋರ ಮಾರ್ಗದರ್ಶನ ಉಪನ್ಯಾಸವರ್ಗದವರ ಸಲಹೆ ಸಹಕಾರಗಳಿಂದ ಸಾಧ್ಯವಾಯಿತು ಎನ್ನುತ್ತಾರೆ ಯಶ್ವಿನ್ ಕೆ.ಆರ್.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ