ಗಿರಿಜನರ ಕಲೆಯನ್ನು ಪ್ರೋತ್ಸಾಹಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Chandrashekhara Kulamarva
0


ಉಡುಪಿ: ವೈವಿಧ್ಯದಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ವಿವಿಧ, ಧರ್ಮ, ಭಾಷೆ, ಸಂಸ್ಕೃತಿಗಳು ಸಮ್ಮಿಳಿತವಾಗಿದ್ದು, ಸಮಾಜದಲ್ಲಿ ಗಿರಿಜನರ ಕಲೆಯನ್ನು ಮುನ್ನೆಲೆಗೆ ತಂದು ಪ್ರೋತ್ಸಾಹಿಸಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

   

ಅವರು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ (ರಿ) ಪೆರ್ಡೂರು ಇದರ ಸಹಯೋಗದೊಂದಿಗೆ ನಡೆದ ಗಿರಿಜನ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 


ವೈವಿಧ್ಯಮಯ ಕಲಾಪ್ರಕಾರಗಳನ್ನು ಗುರುತಿಸುವುದರ ಮೂಲಕ ಗಿರಿಜನರ ಪ್ರತಿಭೆಯನ್ನು  ಸಮಾಜದ ಮುಖ್ಯವಾಹಿನಿಗೆ ತಂದು ಕಲಾವಿದರನ್ನು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸದೃಢರನ್ನಾಗಿಸಬೇಕು  ಎಂದರು. 


ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ 2023 ರ ಕರ್ನಾಟಕ ಜಿಲ್ಲಾ ರಾಜ್ಯೋತ್ಸವದಲ್ಲಿ ಸನ್ಮಾನ ಸ್ವೀಕರಿಸಿದ ಯಕ್ಷಗಾನ ಕಲಾವಿದರಾದ ಮಹಾಬಲ ನಾಯ್ಕ ಅವರನ್ನು ಸನ್ಮಾನಿಸಲಾಯಿತು. 


ಕಾರ್ಯಕ್ರಮದಲ್ಲಿ ಕಲಾವಿದರಿಂದ ಸುಗಮ ಸಂಗೀತ, ಪಟ ಕುಣಿತ, ಡೋಲು ಮತ್ತು ಕೊಳಲು ವಾದನ, ಕೊರಗರ ಮಹಿಳಾ ಸಾಂಸ್ಕೃತಿಕ ವೈಭವ, ಚಿಲಿಪಿಲಿ ಗೊಂಬೆ, ಪುಣ್ಯಕೋಟಿ ನೃತ್ಯ ರೂಪಕ, ಹೋಳಿ ಕುಣಿತ, ಕುಣಿತ ಭಜನೆ, ಯಕ್ಷಗಾನ ವೈಭವ, ಕರಗ ಕೋಲಾಟ, ಚಂಡೆವಾದನ, ಬೇಡರ ಕುಣಿತ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.   


ಕೊರಗ ಸಂಘದ ಜಿಲ್ಲಾ ಅಧ್ಯಕ್ಷೆ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ,  ಮತ್ತು ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರವಿ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವಾಣಿ ಪೆರ್ಡೂರು ನಿರೂಪಿಸಿ, ಪ್ರತೀಕ್ಷಾ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top