ಅಯೋಧ್ಯೆ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಮಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.
ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಸದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


