ಅಡ್ಯನಡ್ಕ: ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಸಚ್ಚಿದಾನಂದ ಶಾಸ್ತ್ರಿ ನೆಕ್ಕರೆ ಅವರು ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಸದಸ್ಯ ಗೋವಿಂದರಾಯ ಶೆಣೈ ಅವರು ಶುಭ ಹಾರೈಸಿದರು.
ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಅವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಅಂಬೇಡ್ಕರ್ ಭಾವಚಿತ್ರಕ್ಕೆ ಈ ಸಂದರ್ಭದಲ್ಲಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ವಂದಿಸಿದರು.
ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ಧ್ವಜಗೀತೆ ಮತ್ತು ನಾಡಗೀತೆಗಳ ಗಾಯನ ಜರುಗಿತು. ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ, ದೈಹಿಕ ಶಿಕ್ಷಣ ಶಿಕ್ಷಕ ಉದಯಕೃಷ್ಣ ಭಟ್, ಕಾಲೇಜಿನ ವಿದ್ಯಾರ್ಥಿ ನಾಯಕಿ ಕು. ನಮಿತಾ ಪಿ. ಕೆ. ಅವರು ನಿರ್ವಹಿಸಿದರು. ಜನತಾ ವಿದ್ಯಾಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


