ಪುತ್ತೂರು: ಮಕ್ಕಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿಯಿಂದ, ಖುಷಿಯಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ನೇರಪ್ರಸಾರದ ವೀಕ್ಷಣೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಯಿತು. ಇದಕ್ಕಾಗಿ ಎಲ್‍ಇಡಿ ಸ್ಕ್ರೀನ್ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಒತ್ತಡವನ್ನು ನಿಭಾಯಿಸುವ ಕಲೆಯನ್ನು ಕ್ರಮೇಣ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬಹುದು ಎಂಬ ಸಲಹೆಯನ್ನು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವೀಕ್ಷಿಸುವುದರ ಮೂಲಕ ಮೈಗೂಡಿಸಿಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


