ಶಿವಮೊಗ್ಗ: ಜನವರಿ 26ರಂದು ಬೆಂಗಳೂರಿನ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಶಿವಮೊಗ್ಗದ ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್.ಎಸ್.ಎಸ್. ಸ್ವಯಂ ಸೇವಕರಾದ ಬಿ ಎ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಕು.ಸಂಧ್ಯಾ ಕೆ.ಕೆ. ಹಾಗೂ ಹರ್ಷವರ್ಧನ್ ಹೆಚ್.ಎಮ್ ಆಯ್ಕೆಯಾಗಿದ್ದು, ಇವರು ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಡಾ.ಸುಕೀರ್ತ, ಶ್ರೀ ರಾಬರ್ಟ್ ರಾಯಪ್ಪ, ಉಪನ್ಯಾಸಕ ವೃಂದ, ಸಿಬ್ಬಂದಿಗಳು ಹಾಗೂ ವಿಧ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ