ಕುಂದಾಪುರ: ಕೊಲ್ಲೂರಿನ ವೆಂಕಟರಮಣ ದೇವಸ್ಥಾನ ಪ್ರೌಢಶಾಲೆ ಮತ್ತು ಕುಂದಾಪುರ ಅಥ್ಲೆಟಿಕ್ ಅಸೋಸಿಯೇಷನ್ ಜಂಟಿಯಾಗಿ ನಡೆಸಿದ ಕೊಡ್ಲಾಡಿ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು 06 ವಿಭಾಗಗಳಲ್ಲಿ 5 ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
1) ಡಾ.ಎನ್.ಎಸ್.ಎ.ಎಂ. ಹೈಸ್ಕೂಲ್ ನ ರಕ್ಷಿತ್ 3 ಕಿ.ಮೀ ಓಟದಲ್ಲಿ ಚಿನ್ನದ ಪದಕವನ್ನು ಹಾಗೂ ಭವಿಶ್ ಕಂಚಿನ ಪದಕ ಗಳಿಸಿದರು.
2) ಡಾ.ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಹೈಸ್ಕೂಲ್ ನ ರಶ್ಮಿತಾ 3 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿರುವರು.
3) ಡಾ. ಎನ್.ಎಸ್.ಎ.ಎಂ ಪಿಯು ಕಾಲೇಜಿನ ಗುರುರಾಜ್ ಭಟ್ 5 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿರುವರು.
4) 5 ಕಿ.ಮೀ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪಿಯು ಕಾಲೇಜಿನ ನಂದಿನಿ ಜಿ ಅವರು ಚಿನ್ನದ ಪದಕ, ಡಾ.ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೀಕ್ಷಿತಾ ಬೆಳ್ಳಿ ಪದಕ ಪಡೆದರು ಹಾಗೂ ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಜೀಕ್ಷಾ ಕಂಚಿನ ಪದಕ ಗೆದ್ದರು.
5. ಡಾ. ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ಪ್ರತೀಕ್ಷಾ 7 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿರುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ