ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ: ಹೆಗ್ಗಡೆಯವರಿಗೆ ವಿಶೇಷ ಆಹ್ವಾನ ಪತ್ರ

Upayuktha
0


ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ಅದನ್ನು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ  ಎಚ್.ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top