ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜ. 30ರಂದು ಮಂಗಳೂರಿಗೆ

Upayuktha
0

ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗಿ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30,ಮಂಗಳವಾರದಂದು ಸಂಜೆ 4.30 ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಪ್ರಸಕ್ತ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.


ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರರವರು ಆಗಮಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮತ್ತು ಜಿಲ್ಲೆಯ ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ ಸಿಂಹ ನಾಯಕ್, ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ.


ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸತೀಶ್ ಕುಂಪಲ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top