ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನವು ಅತೀ ಪುರಾತನ ಕ್ಷೇತ್ರವಾಗಿದ್ದು, ಕಳೆದ ಕೆಲವು ವರ್ಷಗಳಿಂದ ನಡೆದುಕೊಂಡು ಬಂದಿದ್ದ ಜೀರ್ಣೋದ್ಧಾರ ಕಾರ್ಯವು ಅಂತಿಮ ಹಂತದಲ್ಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಜೀರ್ಣೋದ್ಧಾರ ಸಮಿತಿ, ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಮತ್ತು ಊರ ಮಹನೀಯರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಯೋಜನೆ ಮತ್ತು ರೂಪುರೇಶೆಗಳ ತಯಾರಿಗಾಗಿ ಸಮಾಲೋಚನಾ ಸಭೆ ಶ್ರೀಕ್ಷೇತ್ರದಲ್ಲಿ ಜ.26ರಂದು ಶುಕ್ರವಾರ ಮಧ್ಯಾಹ್ನ 2.30ಕ್ಕೆ ಜರಗಲಿರುವುದು.
2024 ಏಪ್ರಿಲ್ ತಿಂಗಳಿನಲ್ಲಿ ಬ್ರಹ್ಮಕಲಶೋತ್ಸವವನ್ನು ನಡೆಸಲು ಮುಹೂರ್ತ ನಿಗದಿಪಡಿಸಲಾಗಿದೆ. ಈ ಸಭೆಯಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜೀರ್ಣೋದ್ಧಾರ ಸಮಿತಿ, ಅಭಿವೃದ್ಧಿ ಟ್ರಸ್ಟ್, ಆಡಳಿತ ಮೊಕ್ತೇಸರರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


