ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ 1992ರಲ್ಲಿ ವೃತ್ತಿಯಿಂದ ನಿವೃತ್ತರಾದ ಅಮೃತ ಸೋಮೇಶ್ವರರು (88) ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ಅಸ್ತಂಗತರಾದರು.
ಇವರು 1968ರಲ್ಲಿ ವಿವೇಕಾನಂದ ಕಾಲೇಜಿಗೆ ಕನ್ನಡ ಉಪನ್ಯಾಸಕರಾಗಿ ಸೇರ್ಪಡೆಗೊಂಡು ಕನ್ನಡ ಸಂಘ, ಯಕ್ಷರಂಜಿನಿಯಂತಹ ಸಂಘಟನೆಯನ್ನು ಹುಟ್ಟುಹಾಕಿ ನೂರಾರು ಮಂದಿ ಬರಹಗಾರರನ್ನು, ಕಲಾವಿದರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಹಾಗೂ ತುಳು ಭಾಷೆಯ ಬೆಳವಣಿಗೆಗೆ ಅವಿರತವಾಗಿ ಶ್ರಮಿಸಿದ್ದಾರೆ.
ಯಕ್ಷಗಾನ ಪ್ರಸಂಗಕರ್ತ, ಅನುವಾದಕ, ಸಂಶೋಧಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರ ಅಮೃತ ಸೋಮೇಶ್ವರರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಅಕಾಡೆಮಿ ಮೊದಲಾದ ಪ್ರಶಸ್ತಿ ಸಂದಿವೆ.
ಇವರ ಅಗಲುವಿಕೆಗೆ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ತಂಡ, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ