ತಂತ್ರಜ್ಞಾನ ಬದಲಾದಂತೆ ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆ: ರವಿಶಂಕರ್

Upayuktha
0



ಪುತ್ತೂರು: ತಂತ್ರಜ್ಞಾನಗಳು ಬದಲಾದಂತೆ ಕ್ರೀಡಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಮ್ಯಾಟ್ ಅಂಕಣಗಳು, ನಿಖರ ಫಲಿತಾಂಶವನ್ನು ನೀಡಬಲ್ಲ ಎಲೆಕ್ಟ್ರಾನಿಕ್ ತಂತ್ರಜ್ಞಾನಗಳು ಬಳಕೆಯಾಗುತ್ತಿದ್ದು ಕ್ರೀಡಾ ಕ್ಷೇತ್ರದ ಉನ್ನತಿಗೆ ಸಹಕಾರಿಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಹೇಳಿದರು. 




ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ  ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋಖೋ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಆಟವನ್ನು ಕ್ರೀಡಾಸ್ಪೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತುಬಿಡಬೇಕು ಎಂದು ಹೇಳಿದರು.




ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ದೃಡತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು. ಕಾಲೇಜು ಪಾಠದ ಜತೆಗೆ ಪಠ್ಯೇತರ ವಿಷಯಗಳಿಗೂ ಸಮಾನ ಅವಕಾಶವನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.




ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಖೋಖೋ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಪಡೆದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಖೋಖೋ ಆಟಗಾರ ವಿವೇಕಾನಂದ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಗುರುಪ್ರಸಾದ್ ಅವರನ್ನು ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.




ಖೋಖೋ ರಾಷ್ಟ್ರೀಯ ತರಬೇತುದಾರ ಹಾಗೂ ತೀರ್ಪುಗಾರ ಕೆನರಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಾರ್ತಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಜ್ಯೋತಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ದಾಮೋದರ್ ಸಹಕರಿಸಿದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ ವಂದಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top