ಆತ್ಮ ಸಂತೃಪ್ತಿ ನೀಡುವಂತಹ ವೃತ್ತಿಯನ್ನು ಆಯ್ದುಕೊಳ್ಳಬೇಕು: ಅಭಿಷೇಕ್. ಡಿ

Upayuktha
0

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಲ್ಲಿ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮ




ಪುತ್ತೂರು: ವಿದ್ಯಾರ್ಥಿಗಳು ಕಲಿಕಾ ಅವಧಿಯಲ್ಲಿಯೇ ಎಲ್ಲಾ ತೆರನಾದ ಕೌಶಲ್ಯಗಳನ್ನು ಕರಗತಮಾಡಿಕೊಳ್ಳಬೇಕು. ಜಗತ್ತು ಬದಲಾಗಿ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಬದಲಾವಣೆಗೆ ವೇಗವಾಗಿ ಒಗ್ಗಿಕೊಂಡು ಆತ್ಮ ಸಂತೃಪ್ತಿ ನೀಡುವಂತಹ ವೃತ್ತಿಯನ್ನು ಆಯ್ದುಕೊಳ್ಳಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಟೈಮ್ಸ್ ಇಂಟರ್‍ನೆಟ್ ನ ಅಸಿಸ್ಟೆಂಟ್ ಪ್ರೋಡಕ್ಟ್ ಮ್ಯಾನೇಜರ್ ಅಭಿಷೇಕ್. ಡಿ ಹೇಳಿದರು.




ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ ಮತ್ತು ಐಕ್ಯುಎಸಿ ಇದರ ಸಹಯೋಗದೊಂದಿಗೆ ನಡೆದ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.




ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮವು ತುಂಬಾ ವಿಸ್ತಾರವಾಗಿ ಬೆಳೆದಿದೆ. ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿರುವುದರಿಂದ ನಮ್ಮನ್ನು ನಾವು ತೊಡಗಿಸಿಕೊಂಡಷ್ಟು ಅವಕಾಶಗಳು ನಮ್ಮ ಕೈಸೇರುತ್ತದೆ. ಪತ್ರಿಕೋದ್ಯಮದ ಆಳವನ್ನು ಅರಿತು, ಕಲಿಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎನ್ನುವುದರ ಜೊತೆಗೆ ಅವರ ವೃತ್ತಿಜೀವನದ ಅನೇಕ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.




ವೇದಿಕೆಯಲ್ಲಿ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ. ಶ್ರೀಧರ್ ಹೆಚ್. ಜಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಶ್ರೀಪ್ರಿಯ ಉಡುಪ ಹಾಗೂ ಉಪನ್ಯಾಸಕರಾದ ಅಕ್ಷಯ ರೈ ಮತ್ತು ಸುತನ್ ಕೇವಳ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಶುಭ್ರ ಪುತ್ರಕಳ ಸ್ವಾಗತಿಸಿ, ಸುಲಕ್ಷಣ ಶರ್ಮ ವಂದಿಸಿದರು. ವಿದ್ಯಾರ್ಥಿನಿ ಧರ್ಮಶ್ರೀ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top