ಮಂಗಳೂರು: ಬಿ.ಕೆ. ಹರಿಪ್ರಸಾದ್ ಅವರು ಸಾಮಾನ್ಯ ಜ್ಞಾನ ಇಲ್ಲದೇ ಇರುವ ರಾಜಕಾರಣಿ. ರಾಜ್ಯದಲ್ಲಿ ಗೋಧ್ರಾ ಮಾದರಿ ಗಲಭೆ ಕುರಿತು ಹೇಳಿಕೆ ನೀಡಿರುವ ಅವರನ್ನು ಸರಕಾರ ಕೂಡಲೇ ತನಿಖೆಗೆ ಒಳಪಡಿಸಿ ಬಂಧನ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಒತ್ತಾಯಿಸಿದರು.
ಭಾನುವಾರ ಸಂಜೆ ಅವರು ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಂತರ ಸುದ್ದಿಗಾರರ ಜತೆಗೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವ ಮೂಲಕ ದಮನ ನೀತಿ ಅನುಸರಿಸುತ್ತಿದೆ. ರಾಜ್ಯಾದ್ಯಂತ ಕರಸೇವಕರ ಮೇಲಿನ ಹಳೆಯ ಪ್ರಕರಣಗಳನ್ನು ಕೆದಕುವ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ನಮ್ಮ ಕಾರ್ಯಕರ್ತರು ಬಗ್ಗುವುದಿಲ್ಲ, ಜಗ್ಗುವುದಿಲ್ಲ. ಇದಕ್ಕೆ ಸರಿಯಾದ ಉತ್ತರ ನಾವು ಕೋಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಮಮಂದಿರ ಉದ್ಘಾಟನೆ ಆಗುವುದನ್ನು ತಡೆಯಲು ಕಾಂಗ್ರೆಸ್ ಗೆ ಅಸಾಧ್ಯ. ಜತೆಗೆ ಈ ಬಾರಿ ಎಲ್ಲ ಸಮೀಕ್ಷಾ ವರದಿಗಳಲ್ಲಿ ಕಾಂಗ್ರೆಸ್ ಗೆ ರಾಜ್ಯದಲ್ಲಿ 4 ಲೋಕಸಭೆ ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗಲಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಹತ್ತಿದೆ. ಜನರು ರಾಜ್ಯದ ದುರಾಡಳಿತ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಭೈರತಿ ಬಸವರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ, ಪರಿಷತ್ ಸದಸ್ಯ ಪ್ರತಾಪ್ ಸಿಂಹ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ