ಉಡುಪಿ: ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ

Upayuktha
0


ಉಡುಪಿ: ಸಂವಿಧಾನ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾವು ಇಂದು ತೆಕ್ಕಟ್ಟೆಗೆ ಆಗಮಿಸಿದ್ದು, ತೆಕ್ಕಟ್ಟೆ ಗ್ರಾಮ ಪಂಚಾಯತ್ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.


ಸಂವಿಧಾನ ಜಾಗೃತಿ ಜಾಥಾಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿ, ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಸಮ್ಮ ದೇಶವೂ ಸಂವಿಧಾನದ ಆಶಯದ ಮೇಲೆ ನಡೆಯುತ್ತಿದೆ ಸಂವಿಧಾನದ ಮಹತ್ವ ಮತ್ತು ಮೌಲ್ಯವನ್ನು ಪ್ರತಿಯೊಬ್ಬರು ಅರಿವನ್ನು ಹೊಂದಬೇಕು ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಸಮಾನರು ಈ ಜಾಥಾ ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.


ಮಹಾಲಿಂಗೇಶ್ವರ ದೇವಸ್ಥಾನದಿಂದ ತೆಕ್ಕಟ್ಟೆ ಗ್ರಾಮ ಪಂಚಾಯತ್ ವರೆಗೆ ಚಂಡೆ ಮತ್ತು ವಾದ್ಯಗಳೊಂದಿಗೆ ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮಿ, ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ರಾವ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಟಿ.ಶೋಭನಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಪಂಚಾಯ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು, ಪಂಚಾಯತ ವ್ಯಾಪ್ತಿಯ ಶಿಕ್ಷಕ ಹಾಗೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಸ್.ಎಲ್.ಆರ್.ಎಂ ಘಟಕದ ಕಾರ್ಯಕರ್ತರು, ಸಂಜೀವಿನಿ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಕ್ರಮಕ್ಕೂ ಮುನ್ನ ಸೈಕಲ್ ಜಾಥಾದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮಿ ಭಾಗಿಯಾದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
To Top