ಧರ್ಮಸ್ಥಳ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿದೆ.
ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ನ್ಯಾಯಮೂರ್ತಿಗಳನ್ನು ಅವಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈಕೋರ್ಟಿನಲ್ಲಿ ಇಂದು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ ಜವಾಬ್ದಾರಿಯುತ ನ್ಯಾಯವಾದಿಯಾಗಿ ಹೈಕೋರ್ಟ್‌ಗೆ ಹೇಳಿಕೆಯನ್ನು ನೀಡಿರುತ್ತಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ನ್ಯಾಯಾಲಯವು ಅವರನ್ನು ನ್ಯಾಯಾಲಯದ ಮುಂದೆ ಜನವರಿ 05 ತಾರೀಖಿನಂದು ಖುದ್ದು ಹಾಜರಾಗುವಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಆತನ ಪತ್ನಿಗೆ ಗೌರವಾನ್ವಿತ ನ್ಯಾಯ ಮೂರ್ತಿಗಳಾದ ಪಿ.ಎಸ್. ದಿನೇಶ್ ಕುಮಾರ್ ಹಾಗೂ ಟಿ.ಜಿ. ಶಿವಶಂಕರೇ ಗೌಡ ಅವರ ನ್ಯಾಯಪೀಠ ಆದೇಶ ಮಾಡಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ