ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ

Upayuktha
0

 ದೈಹಿಕಮಾನಸಿಕ ಆರೋಗ್ಯಕ್ಕೆ ಕ್ರೀಡೆಪೂರಕ -ಅಶ್ವಿನ್  ನಾಯ್ಕ್




ಮಂಗಳೂರು: ಯಾವುದೇ ಕ್ರೀಡೆ ಮಾನಸಿಕ ದೈಹಿಕ ಆರೋಗ್ಯಕ್ಕೆ ಪೂರಕ ಎಂದು ಅಂತರಾಷ್ಟ್ರೀಯ ಮೋಟಾರ್ ರ‍್ಯಾಲಿ ಚ್ಯಾಂಪಿಯನ್ ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.

 


ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ರವಿವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ವನ್ನುದ್ದೇಶಿಸಿ ಮಾತನಾಡುತ್ತಿದ್ದರು.ಪತ್ರಕರ್ತರ ಒತ್ತಡದ ಕಾರ್ಯ ನಿರ್ವಹಣೆಯ ನಡುವೆ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಂಡಿರುವುದು ಉತ್ತಮ.ಈ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದಕ್ಕೆ ಸಂತಸವಾಗಿದೆ ಎಂದು ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.



ಸಮಾರಂಭವನ್ನು ಉದ್ಘಾಟಿಸಿದ ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಶುಭ ಹಾರೈಸಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.




ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ , ಹಿರಿಯ ಕ್ರೀಡಾಪಟು ಕಸ್ತೂರಿ ಬಾಲಕೃಷ್ಣ ಪೈ, ದತ್ತಾತ್ರೇಯ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಕಾರ್ಯ ಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ,ದಯಾ ಕುಕ್ಕಾಜೆ ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್  ಕಾರ್ಯಕ್ರಮ ನಿರೂಪಿಸಿದರು.ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top