ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ 2024, ಮೇ 1ಕ್ಕೆ

Upayuktha
0

ಸಾಂದರ್ಭಿಕ, ಹಳೆಯ ಚಿತ್ರ


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿನಾಂಕ 01-05-2024, ಬುಧವಾರದಂದು ಸಂಜೆ 6:45ಕ್ಕೆ ಗೋಧೋಳಿ  ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.


ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.


ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.


ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ ೨೦ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648,   8147263422


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top